*ಬಜೆಟ್ ಅಧಿವೇಶನ ಆರಂಭ: ಉಭಯ ಸದನ ಉದ್ದೇಶಿಸಿ ರಾಜ್ಯಪಾಲರ ಭಾಷಣ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ವಿಧಾನಸಭೆ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರನ್ನು ಸ್ಪೀಕರ್ ಯು.ಟಿ.ಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹೂಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ ವಿಧಾನಸಭೆಯಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ್ದು, ಸರ್ಕಾರದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಹ ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯದ ಆಯವ್ಯಯ … Continue reading *ಬಜೆಟ್ ಅಧಿವೇಶನ ಆರಂಭ: ಉಭಯ ಸದನ ಉದ್ದೇಶಿಸಿ ರಾಜ್ಯಪಾಲರ ಭಾಷಣ*