Latest

*ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ; ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

ಇಂದಿನಿಂದ ಫೆ.24ರವರೆಗೆ ಅಧಿವೇಶನ ನಡೆಯಲಿದ್ದು, ಇಂದು ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸರ್ಕಾರದ ಸಾಧನೆಗಳ ಬಗ್ಗೆ ವಿವರಿಸಲಿದ್ದಾರೆ .ಫೆ.17ರಂದು ಸಿಎಂ ಬಸವರಾಜ್ ಬೊಮ್ಮಾಯಿ ಪ್ರಸ್ತಕ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ವಿಧಾನಸಭಾ ಚುನಾವಣೆ, ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಹಜವಾಗಿ ಬಜೆಟ್ ಮೇಲೆ ನಿರೀಕ್ಷೆ ಹೆಚ್ಚಿದ್ದು, ಹಲವು ಮಹತ್ವದ ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ.

ಇನ್ನು ಇಂದಿನಿಂದ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತ ಸುತ್ತ 2 ಕೀ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಲಿಸಲಾಗಿದೆ. ಈ ಪ್ರದೇಶಗಳಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ, ಮೆರವಣಿಗೆ, ಪ್ರತಿಭಟನೆ, ಸಭೆಗಳನ್ನು ಮಾಡುವಂತಿಲ್ಲ, ಯಾವುದೇ ಪ್ರತಿಕೃತಿ ದಹನ, ಪ್ರದರ್ಶನ ನಿಷೇಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಭಾರತದ ಮೊಟ್ಟ ಮೊದಲ ಗರ್ಭಕೋಶ ಕ್ಯಾನ್ಸರ್ ಲಸಿಕೆ ಮಾರುಕಟ್ಟೆಗೆ ಬರಲು ಕ್ಷಣಗಣನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button