ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೊರೊನಾ ಸಂಕಷ್ಟದ ನಡುವೆಯೂ ಆರೋಗ್ಯದ ಕಡೆ ಒತ್ತು ಕೊಡುವುದರ ಜತೆಗೆ ವಿವಿಧ ಯೋಜನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ರಾಜ್ಯ ಬಜೆಟ್ ಬೆಳಗಾವಿಗೆ ಪೂರಕವಾದ ಯೋಜನೆಗಳನ್ನು ನೀಡಿದ್ದು ಸಂತಸ ತಂದಿದೆ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಪೌಷ್ಠಿಕ ಕರ್ನಾಟಕ ಎಂಬ ಹೊಸ ಯೋಜನೆಯಡಿಯಲ್ಲಿ ಅಪೌಷ್ಠಿಕತೆಯನ್ನು ಹೊಗಲಾಡಿಸಲು ಪ್ರಯೋಗಿಕವಾಗಿ ರಾಜ್ಯದ ೧೪ ಜಿಲ್ಲೆಗಳಲ್ಲಿ ಅಕ್ಕಿಯೊಂದಿಗೆ ಪೋಷಕಾಂಶಗಳ ಕಬ್ಬಿಣ, ಫೋಲಿಕ್ ಆಮ್ಲ್, ವಿಟಮಿನ್ ಬಿ-12 ಸೇರ್ಪಡೆಗೊಳಿಸಿದ ಸಾರವರ್ಧಿಕ ಅಕ್ಕಿಯನ್ನು 93 ಕೋಟಿ ರೂ,ಗಳಿಗೆ ವಿಸ್ತರಿಸಿದ್ದು, ಶಾಲಾ ಮಕ್ಕಳಲ್ಲಿ ನವ ಉತ್ಸಾಹ ತುಂಬಿದಂತಾಗಿದೆ ಎಂದರು.
ಪೌರಕಾರ್ಮಿಕರ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಮಾಸಿಕ ಎರಡು ಸಾವಿರ ರೂ,ಗಳ ಸಂಕಷ್ಟ ಭತ್ಯೆ ಘೋಷಣೆ ಮಾಡಿದ್ದು ಸಂತಸದ ಸಂಗತಿ.
ಅಥಣಿ ತಾಲೂಕಿನಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪಿಸಲು ಯೋಜನೆ ರೂಪಿಸಿದ್ದು, ಈ ಭಾಗದ ರೈತರ ಮಕ್ಕಳಿಗೆ ಅನಕೂಲವಾಗಲಿದೆ. ಅಲ್ಲದೆ, ಜಿಲ್ಲೆಗೆ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರವನ್ನು ೫೦ ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲು ನಿರ್ಧಾರ ಮಾಡಿದ್ದು ಸ್ವಾಗತಾರ್ಹ. ಬೆಳಗಾವಿ, ಕಿತ್ತೂರು ಮಾರ್ಗವಾಗಿ ಹುಬ್ಬಳ್ಳಿ-ಧಾರವಾಡ ರೈಲ್ವೆ ಯೋಜನೆಗೆ ಅನುದಾನ ಮೀಸಲಿಟ್ಟಿದ್ದು ಈ ಭಾಗದ ಜನರ ಬಹು ವರ್ಷಗಳ ಬೇಡಿಕೆಗೆ ಜೀವ ತುಂಬಿದ್ದಾರೆ ಎಂದು ಪ್ರತಿಕ್ರಯಿಸಿದ್ದಾರೆ.
ರಾಜ್ಯ ಮತ್ತು ಬೆಳಗಾವಿ ಅಭಿವೃದ್ಧಿಗೆ ಬಜೆಟ್ ನಲ್ಲಿ ಬಂಪರ್ ಕೊಡುಗೆ – ಡಾ.ಸೋನಾಲಿ ಸರ್ನೋಬತ್ ಶ್ಲಾಘನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ