ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಿಎಂ ಬಸವರಾಜ್ ಬೊಮ್ಮಾಯಿ ಇಂದು 2022-23ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಕುಂದಾ ನಗರಿ ಬೆಳಗಾವಿ ಜಿಲ್ಲೆಗೆ ಪ್ರಸಕ್ತ ಆಯವ್ಯವದಲ್ಲಿ ಏನೆಲ್ಲ ಕೊಡುಗೆಗಳು ಸಿಕ್ಕಿವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಬೆಳಗಾವಿ, ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಕಲಬುರ್ಗಿ, ಮಂಗಳೂರು ನಗರಗಳಲ್ಲಿ ಉದ್ಯೀಗಸ್ಥ ಮಹಿಳೆಯರಿಗೆ ವಸತಿ ನಿಲಯ ಪ್ರಾರಂಭ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರಿಗೆ ಆದ್ಯತೆ.
ಬೆಳಗಾವಿ ಜಿಲ್ಲೆ ಹಿಡ್ಕಲ್ ಆಣೆಕಟ್ಟು ಪ್ರದೇಶ ಪ್ರವಾಸಿ ತಾಣವಾಗಿ ಅಭಿವೃದ್ಧಿ. ಪಕ್ಷಿ ಹಾಗೂ ಚಿಟ್ಟೆಗಳ ಸಂರಕ್ಷಣೆಗಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪಕ್ಷಿಧಾಮ, ಚಿಟ್ಟೆಗಳ ಉದ್ಯಾನವನ ನಿರ್ಮಾಣ.
ಕ್ಯಾನ್ಸರ್ ರೋಗಿಗಳಿಗೆ ಮಿತವ್ಯಯದಾಯಕ ಚಿಕಿತ್ಸೆ ಒದಗಿಸಲು ಬೆಳಗಾವಿಯಲ್ಲಿ 50 ಕೋಟಿ ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪನೆ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ದೀನ್ ದಯಾಳ್ ಉಪಾದ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯ ಎಂಬ ಹೊಸ ಯೋಜನೆಯಡಿ ರಾಜ್ಯದ ಶೈಕ್ಷಣಿಕ ಕೇಂದ್ರಗಳಾದ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರ್ಗಿ, ಮಂಗಳೂರು ಹಾಗೂ ಮೈಸೂರಿನಲ್ಲಿ ತಲಾ 1000 ಸಾಮರ್ಥ್ಯದ ಬಹುಮಹಡಿ ವಿದ್ಯಾರ್ಥಿ ಸಮುಚ್ಛಯ ನಿರ್ಮಾಣ
ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ ಹಾಗೂ ಒಕ್ಕಲಿಗ ಅಭಿವೃದ್ಧಿ ನಿಗಮಗಳಿಗಾಗಿ 100 ಕೋಟಿ ರೂಪಾಯಿಗಳ ಮೊತ್ತದಲ್ಲಿ ಕಾರ್ಯಕ್ರಮ. ಮರಾಠಾ ಅಭಿವೃದ್ಧಿ ನಿಗಮದ ಮೂಲಕ 50 ಕೋಟಿ ರೂಪಾಯಿಗಳ ಮೊತ್ತದಲ್ಲಿ ಅಭಿವೃದ್ಧಿ ಕಾರ್ಯಕ್ರಮ.
ಉತ್ತರ ಕರ್ನಾಟಕದ ಬಹುದಿನಗಳ ನಿರೀಕ್ಷೆಯ ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗ ಯೋಜನೆಗೆ ರಾಜ್ಯದ ಪಾಲಿನ 925 ಕೋಟಿ ರೂ. ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.
ಗಡಿಯಲ್ಲಿರುವ ಪ್ರದೇಶಗಳಲ್ಲಿ ಸಂಪರ್ಕ ರಸ್ತೆಗಳು, ಕುಡಿಯುವ ನೀರಿನ ವ್ಯವಸ್ಥೆ, ಬೀದಿ ದೀಪಗಳು ಮುಂತಾದ ಮೂಲಭೂತ ಸೌಕರ್ಯಗಳನ್ನು ಗ್ರಾಮ ಪಂಚಾಯಿತಿಗಳ ಮೂಲಕ ಒದಗಿಸಿ ಸಮಗ್ರ ಅಭಿವೃದ್ಧಿ. ಬೆಳಗಾವಿಯ ಅಥಣಿ, ಬಳ್ಳಾರಿಯ ಹಗರಿಗೆ ನೂತನ ಕೃಷಿ ಕಾಲೇಜು ನಿರ್ಮಾಣಕ್ಕೆ ಕ್ರಮ.
ಸಾಮಾನ್ಯ ಸೌಲಭ್ಯ ಕೇಂದ್ರಗಳು ಹಾಗೂ ಇತರೆ ಮೂಲಭೂತ ಸೌಕರ್ಯಗಳನ್ನೊಳಗೊಂಡ ಬಹುಮಹಡಿ ಕಾರ್ಖಾನೆ ಪರಿಕಲ್ಪನೆ ಅವಶ್ಯಕ ಪ್ಲಗ್ ಆಂಡ್ ಪ್ಲೇ ಮೂಲಭೂತ ಸೌಲಭ್ಯಗಳನ್ನು ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರದ TIES ಯೋಜನೆಯಡಿ ರೂಪಿಸಲು ಕ್ರಮ.
ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗಕ್ಕೆ ಅನುದಾನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ