ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಖ್ಯಮಂತ್ರಿಗಳು ಮಂಡಿಸಿರುವ ಬಜೆಟ್ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಶೈಕ್ಷಣಿಕ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಕೆ ಎಲ್ ಇ ಸಂಸ್ಥೆಗಳ ಕಾರ್ಯಾಧ್ಯಕ್ಷ ದಾ.ಪ್ರಭಾಕರ ಕೋರೆ ಶ್ಲಾಘಿಸಿದ್ದಾರೆ.
ನೂತನ ಶಿಕ್ಷಣ ನೀತಿಯನ್ನು ಗಮನದಲ್ಲಿಟ್ಟುಕೊಂಡು ಅದರಲ್ಲಿಯೂ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ‍್ಯಕ್ಕಾಗಿ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಅದರೊಂದಿಗೆ ರಾಜ್ಯದ ಕೃಷಿಗೆ ಹೆಚ್ಚಿನ ಕೊಡುಗೆ ನೀಡಿರುವ ಬಜೆಟ್‌ದಲ್ಲಿ ಅಥಣಿಯಲ್ಲಿ ನೂತನ ಕೃಷಿ ಕಾಲೇಜಿನ ಪ್ರಾರಂಭಕ್ಕೆ ಒತ್ತುನೀಡಲಾಗಿದೆ. ಆರೋಗ್ಯಕ್ಷೇತ್ರದ ವಿಕಾಸಕ್ಕೂ ಹೆಚ್ಚಿನ ಅನುದಾನವನ್ನು ಮೀಸಲಾಗಿಡಲಾಗಿದೆ ಎಂದರು.
ಗ್ರಾಮೀಣ ಭಾಗದ ಹತ್ತುಹಲವಾರು ಸಮಸ್ಯೆಗಳಿಗೆ ಈ ಬಜೆಟ್ ನೂತನ ಆಶಾಕಿರಣವನ್ನು ಮೂಡಿಸಿದೆ. ಆಶಾ ಕಾರ್ಯಕರ್ತರು, ಪೌರಕಾರ್ಮಿಕರು ಹೀಗೆ ಸಮಾಜಕ್ಕೆ ಮೌಲಿಕ ಸೇವೆ ನೀಡುತ್ತಿರುವ ವರ್ಗದವರನ್ನು ಸಿಎಂ ಅವರು ಬಜೆಟ್‌ನಲ್ಲಿ ಎತ್ತಿಹಿಡಿದಿದ್ದಾರೆ.
ಮೊದಲ ಸಲ ಬಜೆಟ್ ಮಂಡಿಸಿರುವ ಸಿಎಂ.ಬೊಮ್ಮಾಯಿಯವರು ರಾಜ್ಯದ ಜನತೆಯ ಕನಸನ್ನು ಸಾಕಾರಗೊಳಿಸಿದ್ದಾರೆ. ಜನ ಕಲ್ಯಾಣದ ಈ ಬಜೆಟ್ ಭರವಸೆಯ ಹೆಜ್ಜೆ ಇಟ್ಟಿದೆ. ಸರ್ಕಾರಕ್ಕೆ ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಡಾ.ಪ್ರಭಾಕರ ಕೋರೆ ತಿಳಿಸಿದ್ದಾರೆ.
ಸರ್ವವ್ಯಾಪಿ ಸರ್ವಸ್ಪರ್ಶಿ ಬಜೆಟ್: ಶಾಸಕ ಅನಿಲ ಬೆನಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ