ದಾಖಲೆಯ 15 ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್ ಮಂಡನೆ ಆರಂಭಿಸಿದ್ದು, ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದ್ದು ಈ ಸಂದರ್ಭದಲ್ಲಿ ನನ್ನ 15ನೇ ಬಜೆಟ್ ಮಂಡನೆ ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮಂದನೆ ಆರಂಭಿಸಿರುವ ಸಿಎಂ ಸಿದ್ದರಾಮಯ್ಯ, ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ… ಎಂಬ ಹಾಡಿನ ಸಾಲನ್ನು ಉಲ್ಲೇಖಿಸಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ ಅಲ್ಲ, ಇವು ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು. ಗ್ಯಾರಂಟಿ ಯೋಜನೆ ಜಾರಿಯಿಂದಾಗಿ ಇಡೀ ಜಗತ್ತು ಇಂದು ಕರ್ನಾಟಕದತ್ತ ತಿರುಗಿ ನೋಡುವಂತಾಗಿದೆ. ಹಲವು ಸಂಸ್ಥೆಗಳು ಅಂತರಾಷ್ಟ್ರೀಯ ಸಂಸ್ಥೆಗಳು, ದೇಶಗಳು ನಮ್ಮ ಯೋಜನೆಗಳ ಬಗ್ಗೆ ಅಧ್ಯಯನ ನಡೆಸಿವೆ ಎಂದರು.
ಬಜೆಟ್ ನ ಒಟ್ಟು ಗಾತ್ರ 3,71,383 ಕೋಟಿ ರೂ ಆಗಿದೆ ಎಂದು ಹೇಳಿದರು.
ಅವೈಜ್ಞಾನಿಕ ಜಿಎಸ್ ಟಿಯಿಙದಾಗಿ 59 ಸಾವಿರ ಕೋಟಿ ನಷ್ಟವಾಗಿದೆ ಎಂದರು.
ಕೇಂದ್ರ ಸರಕಾರದ ವಿರುದ್ದ ಟೀಕಾಪ್ರಹಾರ ಮಾಡಿದರು. ಇದರಿಂದ ಕೆರಳಿದ ವಿಪಕ್ಷದವರು ತೀವ್ರ ಗದ್ದಲ ಎಬ್ಬಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ