ಬಜೆಟ್ ಪ್ರತಿ:
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಮೊದಲ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬಜೆಟ್ ಮಂಡನೆ ಭಾಷಣದ ವೇಳೆ ಶಿರಸಿಯಲ್ಲಿ ಪರಿಸರ ವಿಜ್ಞಾನ ವಿಶ್ವ ವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಘೋಷಿಸಿದರು.
ಕಾಡಾನೆ ಹಾವಳಿ ತಡೆಯಲು ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ರಚಿಸಿರುವ ಕಾಡಾನೆ ಕಾರ್ಯಪಡೆಯನ್ನು ಮೈಸೂರು ಹಾಗೂ ಮಂಡ್ಯಕ್ಕೂ ವಿಸ್ತರಿಸಿ 199 ಸಿಬ್ಬಂದಿ ನೇಮಕಾತಿಗೆ ನಿರ್ಧರಿಸಲಾಗಿದೆ ಎಂದರು.
ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಕಿತ್ತೂರು ಕರ್ನಾಟಕ ಮಂಡಳಿ ಸ್ಥಾಪಿಸಲಾಗುವುದು ಎಂದರು.
*ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ; ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭ*
https://pragati.taskdun.com/karnataka-buidget-2023cm-basavaraj-bommaividhanasoudha-4/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ