Kannada NewsKarnataka NewsLatest

*ಕಾವೇರಿ ಕಿಚ್ಚು: ಅಖಂಡ ಕರ್ನಾಟಕ ಬಂದ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ರೈತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಹೋರಾಟ ಜೋರಾಗಿದ್ದು, ಇಡೀ ಕರ್ನಾಟಕವನ್ನೇ ಬಂದ್ ಮಾಡಲು ಕರೆ ನೀಡಲಾಗಿದೆ.

ಕಾವೇರಿ ನೀರಿಗಾಗಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ ಮಾಡುವುದಾಗಿ ಘೋಷಿಸಿದ್ದಾರೆ.

ಇನ್ನು ಸೆ.26ರಂದು ಮಂಗಳವಾರ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದ್ದು, 150ಕ್ಕೂ ಹೆಚ್ಚು ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿವೆ. ಈ ಮಧ್ಯೆ ಸೆ.29ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಬೆಂಗಳೂರು ಬಂದ್ ಹಾಗೂ ಕರ್ನಾಟಕ ಬಮ್ದ್ ಬಗ್ಗೆ ನಾಳೆ ಖಾಸಗಿ ಹೋಟೆಲ್ ನಲ್ಲಿ ನಡೆಯಲಿರುವ ರೈತ ಪರ ಸಂಘಟನೆ ಹಾಗೂ ಕನ್ನಡ ಪರ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಬಂದ್ ರೂಪುರೇಷೆ ಬಗ್ಗೆ ನಾಳೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ.


Related Articles

Back to top button