Latest

ಮುಖ್ಯಕಾರ್ಯದರ್ಶಿ ಹುದ್ದೆಗೆ 9 ಐಎಎಸ್ ಅಧಿಕಾರಿಗಳು ರೇಸ್ ನಲ್ಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಮುಖ್ಯಕಾರ್ಯದರ್ಶಿ ಹುದ್ದೆಗೆ ಬರೋಬ್ಬರಿ 9 ಹಿರಿಯ ಐಎಎಸ್ ಅಧಿಕಾರಿಗಳು ರೇಸ್ ನಲ್ಲಿದ್ದಾರೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದ್ದಾರೆ.

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನೂತನ ಮುಖ್ಯಕಾರ್ಯದರ್ಶಿ ನೇಮಕ ಮಾಡಲು ಅನುಮೋದನೆ ನೀಡಲಾಗಿದೆ. 9 ಐಎಎಸ್ ಧಿಕಾರಿಗಳು ರೇಸ್ ನಲ್ಲಿದ್ದಾರೆ ಎಂದರು.

ಹಾಲಿ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಇದೇ ತಿಂಗಳು ನಿವೃತ್ತಿಯಾಗಲಿದ್ದು, ನೂತನ ಮುಖ್ಯಕಾರ್ಯದರ್ಶಿ ಯಾರಾಗಲಿದ್ದಾರೆ ಎಂಬುದು ಸಿಎಂ ನಿರ್ಧಾರಕ್ಕೆ ಬಿಟ್ಟದ್ದು ಎಂದು ಹೇಳಿದರು.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ, ಐಎಸ್ ಎನ್ ಪ್ರಸಾದ್, ರಜನೀಶ್ ಗೋಯೆಲ್, ಶಾಲಿನಿ ರಜನೀಶ್ ಮೊದಲಾದವರು ಮುಖ್ಯ ಕಾರ್ಯದರ್ಶಿ ಹುದ್ದೆಯ ರೇಸ್ ನಲ್ಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button