ಪ್ರಗತಿವಾಹಿನಿ ಸುದ್ದಿ: ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳುಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಗ್ ಶಾಕ್ ನೀಡಿದೆ. ಈವರೆಗೆ ಉಚಿತವಾಗಿ ಅಂಕಪಟ್ಟಿ ತಿದ್ದುಪಡಿ ಮಡಿಕೊಡುತ್ತಿದ್ದ ಮಂಡಳಿ ಈಗ ಭಾರಿ ಶುಲ್ಕ ವಿಧಿಸಿದೆ.
ಅಂಕಪಟ್ಟಿ ತಿದ್ದುಪಡಿಗೆ 1600 ರೂಪಾಯಿ ಶುಲ್ಕ ವಿಧಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದೆ.
ವಿದ್ಯಾರ್ಥಿಗಳ ಹೆಸರು, ತಂದೆ, ತಾಯಿ ಹೆಸರು, ಜನ್ಮ ದಿನಾಂಕ ತಪ್ಪಾಗಿದ್ದಲ್ಲಿ ಅವುಗಳನ್ನು ಮಂಡಳಿ ಗಮನಕ್ಕೆ ತಂದರೆ ಉಚಿತವಾಗಿ ತಿದ್ದುಪಡಿ ಮಾಡಿಕೊಡಲಾಗುತ್ತಿತ್ತು. ಆದರೆ ಈಗ ಅಂಕಪಟ್ಟಿ ತಿದ್ದುಪಡಿಗೆ 1600 ರೂ ಶುಲ್ಕ ವಿಧಿಸಿದೆ. ಇದು ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ