Kannada NewsKarnataka NewsLatest

*ಐಸ್ ಕ್ರೀಂ ಘಟಕಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಬೀದಿಬದಿ ಆಹಾರ, ಹೋಟೆಲ್, ರೆಸ್ಟೋರೆಂಟ್, ಆಹಾರ ಗೋದಾಮುಗಳ ಮೇಲೆ ದಾಅಳಿ ಬೆನ್ನಲ್ಲೇ ಇದೀಗ ಆಹಾರ ಇಲಾಖೆ ಅಧಿಕಾರಿಗಳು ಐಸ್ ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದೆ. ಬೆಂಗಳೂರು, ಮೈಸೂರು, ರಾಯಚೂರು ಸೇರಿದಂತೆ ರಾಜ್ಯದ 45 ಘಟಕಗಳಲ್ಲಿ ತಪಾಸಣೆ ನಡೆಸಲಾಗಿದೆ.ದಾಳಿ ವೇಳೆ ಅವಧಿ ಮೀರಿದ ಆಹಾರ ಪದಾರ್ಥಗಳು ಪತ್ತೆಯಾಗಿವೆ.

ಪರಿಶೀಲನೆ ವೇಳೆ ಅವಧಿ ಮೀರಿದ ಐಸ್‌ಕ್ರೀಂ, ಹಾಲು, ಬಿಸ್ಕತ್ ಮತ್ತು ಕೊಬ್ಬರಿ ಪುಡಿ ಪತ್ತೆಯಾಗಿವೆ. ಇದರೊಂದಿಗೆ ಆಹಾರ ಉತ್ಪನ್ನಗಳ ಮೇಲೆ ಲೇಬಲಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದೂ ಅಧಿಕಾರಿಗಳ ಗಮನಕ್ಕೆ ಬಂದಿದೆ.

ಬೆಂಗಳೂರಿನ ಜಯನಗರ 3ನೇ ಬ್ಲಾಕ್‌ನಲ್ಲಿರುವ ಸಾವರ ಐಸ್‌ಕ್ರೀಂ ಕೆಫೆ, ಬಿಳೇಕಹಳ್ಳಿಯ ಬನ್ನೇರುಘಟ್ಟ ರಸ್ತೆಯ ಎನ್ ಎಂಟರ್‌ಪ್ರೈಸಸ್, ಮೈಸೂರಿನ ಜಾನ್ ಕ್ಯಾಂಡಿ ಐಸ್‌ಕ್ರೀಂ ತಯಾರಿಕಾ ಘಟಕ ಮತ್ತು ರಾಯಚೂರಿನ ಜೆಮಿನಿ ಐಸ್‌ಕ್ರೀಂ ತಯಾರಿಕಾ ಘಟಕ ಸೇರಿದಂತೆ ವಿವಿಧೆಡೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ತಪಾಸಣೆ ವೇಳೆ ಐಸ್‌ಕ್ರೀಂ, ಹಾಲು, ಹಾಲಿನ ಪುಡಿ, ಫ್ಲೇವರಿಂಗ್ ಪದಾರ್ಥಗಳು ಮತ್ತು ಸಕ್ಕರೆ ಸೇರಿದಂತೆ ಒಟ್ಟು 70 ಆಹಾರ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇವುಗಳನ್ನು ಗುಣಮಟ್ಟದ ಪರಿಶೀಲನೆಗಾಗಿ ತೆಗೆದುಕೊಳ್ಳಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button