Karnataka NewsPolitics

*25 ಅಡಿ ಎತ್ತರದ ಕನ್ನಡಾಂಬೆಯ ಪ್ರತಿಮೆ ಅನಾವರಣ*

ಪ್ರಗತಿವಾಹಿನಿ ಸುದ್ದಿ : ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಕನ್ನಡಾಂಬೆಯ 25 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಜಂಟಿಯಾಗಿ ಅನಾವರಣಗೊಳಿಸಿದರು.

ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಶಕ್ತಿಸೌಧ ಪಶ್ಚಿಮ ದ್ವಾರದಲ್ಲಿ ಪ್ರತಿಮೆಯನ್ನು ಅನಾವರಣ ಮಾಡಲಾಯಿತು. ‘ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ’ ಕನ್ನಡ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಈ ದಿನ ತಾಯಿ ಭುವನೇಶ್ವರಿಯ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಯಿತು.

Home add -Advt

ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇದೆ. ಮುಂಭಾಗದಲ್ಲಿ ಭೌಗೋಳಿಕ ನಕ್ಷೆ ಇದ್ದರೆ, ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ. ಕರ್ನಾಟಕದ ಪ್ರಸಿದ್ಧ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ ಕದಂಬ ಹಾಗೂ ಆಧುನೀಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದರಲ್ಲಿ ರಾಜಲಾಂಛನಗಳಾದ ಹೊಯ್ಸಳ ಲಾಂಛನ, ವೈಜಯಜಯಂತಿ ಮಾಲೆ, ಕಂಠಿಹಾರ, ಗಂಡ ಭೇರುಂಡ ಇರಲಿದೆ. ನಾವು ಅದುಕೊಂಡಕ್ಕಿಂತ ಚೆನ್ನಾಗಿ ಪ್ರತಿಮೆ ಮೂಡಿ ಬಂದಿದೆ.

Related Articles

Back to top button