Karnataka NewsLatestPolitics
*ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದ ಕಿಡಿಗೇಡಿಗಳು*

ಪ್ರಗತಿವಾಹಿನಿ ಸುದ್ದಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆಯನ್ನು ತೆರೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಬೆಂಗಳೂರು ಕೇಂದ್ರ ವಿಭಾಗದ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ರಾಜ್ಯಪಾಲ ಗೆಹ್ಲೋಟ್ ಹೆಸರಲ್ಲಿ ಫೇಸ್ ಬುಕ್ ಖಾತೆ ತೆರೆದಿರುವ ಕಿಡಿಗೇಡಿ, ಸಾರ್ವಜನಿಕರಿಗೆ ಸಂದೇಶ ರವಾನಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.