EducationKarnataka NewsLatest
*6ನೇ ತರಗತಿಯಿಂದಲೇ ವಿದ್ಯಾರ್ಥಿಗಳಿಗೆ AI ಮತ್ತು ಕೋಡಿಂಗ್ ಶಿಕ್ಷಣ: ಸರ್ಕಾರದ ಮಹತ್ವದ ನಿರ್ಧಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ AI ಶಿಕ್ಷಣಕ್ಕೆ ಹೊಸ ಹೆಜ್ಜೆ ಇಡಲಾಗಿದೆ. 6ನೇ ತರಗತಿಯಿಂದಲೇ ವಿದ್ಯಾರ್ಥಿಗಳಿಗೆ AI ಮತ್ತು ಕೋಡಿಂಗ್ ಶಿಕ್ಷಣ ಪರಿಚಯಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಎಐ ಅಭಿಯಾನ ಮತ್ತು ಕೋಡಿಂಗ್ ಗುರುಕುಲ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಗೂ ಭವಿಷ್ಯದ ತಂತ್ರಜ್ಞಾನ ಕೌಶಲ್ಯಗಳನ್ನು ಕಲಿಯುವ ಅವಕಾಶ ಕಲ್ಪಿಸಲಾಗುತ್ತಿದೆ. ಈ ಮೂಲಕ ಶೈಕ್ಷಣಿಕ ಅಭ್ವೃದ್ಧಿಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಇತ್ತೀಚಿನ ದಿನಗಳಲ್ಲಿ ಎಐ ತಂತ್ರಜ್ಞಾನ ಎಕ್ಲದರಲ್ಲೂ ಹಾಸುಹೊಕ್ಕಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಶಿಕ್ಷಣದಲ್ಲಿಯೇ ಎಐ ಕಲಿಕೆ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವುದರ ಜೊತೆಗೆ ಎಐ ಹಗೂ ಕೋಡಿಂಗ್ ಪರಿಚಯಿಸುತ್ತಿರುವುದು ಮಕ್ಕಳ ಭ್ಯಷ್ಯಕ್ಕೆ ಉತ್ತಮ ಕೊಡುಗೆಯಾಗಿದೆ.




