Kannada NewsKarnataka NewsLatest

*ನಾಳೆಯಿಂದ ಆಸ್ಪತ್ರೆಗಳಲ್ಲಿ ಕಡ್ಡಾಯ ದರಪಟ್ಟಿ ಪ್ರದರ್ಶನ ವಿಚಾರ*: *ಹೈಕೋರ್ಟ್ ಗೆ ಮಹತ್ವದ ಮಾಹಿತಿ ನೀಡಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ನಾಳೆ ನವೆಂಬರ್.1ರಿಂದ ಜಾರಿಗೆ ಬರುವಂತೆ ಔಷಧಗಳು, ವೈದ್ಯಕೀಯ ಉಪಕರಣಗಳು ಹಾಗೂ ಬಳಕೆಯ ವಸ್ತುಗಳ ಮೂಲ ದರವನ್ನು ಕಡ್ಡಾಯವಾಗಿ ಬಹಿರಂಗವಾಗಿ ಪ್ರಕಟಿಸುವಂತೆ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿ ಹೊರಡಿಸಿರುವ ಆದೇಶ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಹತ್ವದ ವಿಚಾರ ತಿಳಿಸಿದೆ.

ಸುತ್ತೋಲೆ ಜಾರಿಗೊಳಿಸುವಂತೆ ಒತ್ತಾಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಈ ಮೂಲಕ ದರಪಟ್ಟಿ ವಿಚಾರದಲ್ಲಿ ಸರ್ಕಾರ ತನ್ನ ಕಠಿಣ ನಿಲುವನ್ನು ಸ್ವಲ್ಪ ಸಡಿಲಿಸಿದೆ.

ಕರ್ನಾಟಕದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳ ಬಿಲ್‌ನಲ್ಲಿ ಔಷಧಗಳು ಮತ್ತು ವೈದ್ಯಕೀಯ ಉಪಕರಣಗಳ ಮೂಲ ದರವನ್ನು ನ.1ರಿಂದ ಕಡ್ಡಾಯವಾಗಿ ಬಹಿರಂಗವಾಗಿ ಪ್ರದರ್ಶಿಸಬೇಕು ಎಂದು ಹೊರಡಿಸಿದ್ದ ಸುತ್ತೋಲೆಯನ್ನು ಸರ್ಕಾರ ದಿಢೀರ್‌ ಸಡಲಿಕೆ ಮಾಡಿದೆ. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ಸದ್ಯಕ್ಕೆ ಕಡ್ಡಾಯವಾಗಿ ಜಾರಿಗೊಳಿಸಲು ಒತ್ತಾಯಿಸುವುದಿಲ್ಲ ಎಂದು ಸರ್ಕಾರ ಕೋರ್ಟ್‌ಗೆ ಮಾಹಿತಿ ನೀಡಿದೆ.

ಇದರಿಂದಾಗಿ ಸುತ್ತೋಲೆ ಕಡ್ಡಾಯವಾಗಿ ಜಾರಿಗೊಳಿಸುವಂತೆ ಒತ್ತಾಯಿಸುವುದಿಲ್ಲವೆಂದು ತಿಳಿಸಿ ಹೈಕೋರ್ಟ್‌ ವಿಚಾರಣೆಯನ್ನು ನವೆಂಬರ್ 12ಕ್ಕೆ ಮುಂದೂಡಿದೆ.

Related Articles

Back to top button