Kannada NewsKarnataka NewsLatest

*ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ*: *ಯಾವ ನಿಗಮಕ್ಕೆ ಎಷ್ಟು ಅನುದಾನ?*

ಪ್ರಗತಿವಾಹಿನಿ ಸುದ್ದಿ: ಡೀಸೆಲ್ ಇಲ್ಲದೇ ಇತ್ತೀಚೆಗೆ ಸಾರಿಗೆ ಬಸ್ ಗಳು ನಿಂತಲ್ಲೇ ನಿಂತಿದ್ದವು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಇಂಧನ ಪಾವತಿಗಾಗಿ ನಾಲ್ಕು ಸಾರಿಗೆ ನಿಗಮಗಳಿಗೆ ಅನುದಾನ ಬಿಡುಗಡೆ ಮಾಡಿದೆ.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು ಎದುರಿಸುತ್ತಿದ್ದ ತೀವ್ರ ಇಂಧನ ವೆಚ್ಚದ ಹೊರೆ ಹಾಗೂ ಡೀಸೆಲ್ ಬಾಕಿ ಪಾವತಿಯ ಸಮಸ್ಯೆಗೆ ರಾಜ್ಯ ಸರ್ಕಾರ ಕೊನೆಗೂ ಪರಿಹಾರ ನೀಡಿದ್ದು, ನಾಲ್ಕೂ ಸಾರಿಗೆ ನಿಗಮಗಳ ಡೀಸೆಲ್ ಬಾಕಿ ಮೊತ್ತವನ್ನು ತೀರಿಸಲು ಒಟ್ಟು 100 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

2026-27ನೇ ಸಾಲಿನ ಬಜೆಟ್ ಹಂಚಿಕೆಯಡಿ ಈ ಅನುದಾನ ಬಳಕೆಗೆ ಸರ್ಕಾರ ಅನುಮತಿ ನೀಡಿದ್ದು, ಸಾರಿಗೆ ಸಂಸ್ಥೆಗಳ ದಿನನಿತ್ಯದ ಕಾರ್ಯಾಚರಣೆಗೆ ಅನುಕೂಲವಾಗಲಿದೆ.

ಸರ್ಕಾರ ಬಿಡುಗಡೆ ಮಾಡಿರುವ ಒಟ್ಟು 100 ಕೋಟಿ ರೂ. ಅನುದಾನದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) ಅತಿ ಹೆಚ್ಚಿನ ಪಾಲು ದೊರೆತಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ₹62.53 ಕೋಟಿ (ಅತಿ ಹೆಚ್ಚು)
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ₹18.90 ಕೋಟಿ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ₹10.61 ಕೋಟಿ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ₹7.96 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button