
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಶಾಲಿನಿ ರಜನೀಶ್ ಅವರನ್ನು ನೂತನ ಸಿಎಸ್ ಆಗಿ ನೇಮಕ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.
ಸರ್ಕಾರದ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು 5 ದಿನಗಳಲ್ಲಿ ನಿವೃತ್ತಿಯಾಗಲಿದ್ದಾರೆ. ಇ ಹಿನ್ನೆಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ