ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಯಾವುದೇ ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಿಲ್ಲ. ಈಗಾಗಲೇ ಏಪ್ರಿಲ್ 5 ಮತ್ತು 9ರಂದು ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ ಎಂದು ಆಯೋಗ ಪ್ರಕಟಿಸಿದೆ ಎಂಬ ಅರ್ಥದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ರಾಜ್ಯಪತ್ರ ನಕಲಿ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಗ್ರಾಮ ಪಂಚಾಯಿತಿ ಚುನಾವಣೆಗೆ ಚುನಾವಣಾ ಆಯೋಗ ಮುಹೂರ್ತ ಫಿಕ್ಸ್ ಮಾಡಿದ್ದು, ಏಪ್ರಿಲ್ 5 ಮತ್ತು 9ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಜಾಲತಾಣಗಳಲ್ಲಿ ಹಾಗೂ ಎಲ್ಲಾ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿತ್ತು. ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ಚುನಾವಣಾ ಆಯೋಗ ಇದು ನಕಲಿ ಎಂದು ತಿಳಿಸಿದೆ.
ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಆಯೋಗ ಈಗಾಗಾಲೇ ಹರಿದಾಡುತ್ತಿರುವ ಪ್ರಕಟಣೆ ನಕಲಿ ರಾಜ್ಯಪತ್ರವಾಗಿದ್ದು, ಆಯೋಗ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬಂಧ ಯಾವುದೇ ದಿನಾಂಕ ಗೊತ್ತುಪಡಿಸಿಲ್ಲ. ಇಂತಿಷ್ಟೇ ಶಿಕ್ಷಣ, ಇಂತಿಷ್ಟೇ ಮಕ್ಕಳನ್ನು ಹೊಂದಿರಬೇಕು ಎಂದು ಯಾವುದೇ ಆದೇಶ ಹೊರಡಿಸಿಲ್ಲಾ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾದುತ್ತಿರುವ ರಾಜ್ಯ ಚುನಾವಣಾ ಆಯೋಗದ ಹೆಸರಿನಲ್ಲಿರುವ ಆದೇಶವು ನಕಲಿಯಾಗಿರುತ್ತದೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ