ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ನೆರೆ ಸಂತ್ರಸ್ಥರಿಗೆ ಕೇಂದ್ರವು ತುರ್ತು ಹಂತದ ಪರಿಹಾರ ಬಿಡುಗಡೆ ಮಾಡಿದ್ದು, ಕರ್ನಾಟಕ ಸರಕಾರ ಸಂತ್ರಸ್ತರಿಗೆ ದೇಶದಲ್ಲಿಯೇ ಅತಿ ಹೆಚ್ಚು ಪರಿಹಾರ ನೀಡಿದೆ ಎಂದು ಬೆಳಗಾವಿ ಜಿಲ್ಲಾ ಗ್ರಾಮೀಣ ಬಿಜೆಪಿ ಅಧ್ಯಕ್ಷ, ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೇಳಿದರು.
ಇಂದು ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗೆ ಪ್ರಾರಂಭದಲ್ಲಿ ಹತ್ತು ಸಾವಿರ ರೂ. ಚೆಕ್ ವಿತರಣೆ ಮಾಡಲಾಗಿದೆ. ದೇಶದಲ್ಲಿಯೇ ಅತಿ ಹೆಚ್ಚು ಪರಿಹಾರವನ್ನು ರಾಜ್ಯ ಸರಕಾರ ಬಿಡುಗಡೆ ಮಾಡಿದ್ದು ಮನೆಗಳ ನಿರ್ಮಾಣಕ್ಕೆ 5 ಲಕ್ಷ ಘೋಷಣೆ ಮಾಡಿದೆ. ಅದರಲ್ಲಿ ಒಂದು ಲಕ್ಷ ರೂಪಾಯಿಯನ್ನು ಈಗಾಗಲೆ ಸಂತ್ರಸ್ಥರಿಗೆ ಕೊಡಲಾಗಿದೆ. ಇನ್ನುಳಿದ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಿದ್ದಾರೆ ಎಂದರು.
ಮಧ್ಯವರ್ತಿಗಳ ಹಾವಳಿ ಇಲ್ಲದೆ ಉತ್ತಮ ರೀತಿಯಲ್ಲಿ ರಾಜ್ಯ ಸರಕಾರ ಕೆಲಸ ಮಾಡಿದೆ ಮತ್ತು ನಮ್ಮ ಮನವಿಗೆ ಓಗೊಟ್ಟು ಕೇಂದ್ರವು ರಾಜ್ಯಕ್ಕೆ ತುರ್ತು ಹಂತವಾಗಿ 1200 ಕೋಟಿ ಬಿಡುಗಡೆ ಮಾಡಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ವಕ್ತಾರ ಎಂ.ಬಿ.ಜಿರಲಿ, ಮುಖಡರಾದ ರಾಜು ಚಿಕ್ಕನಗೌಡರ, ಧನಂಜಯ ಜಾಧವ, ಬಸವರಾಜ ರೊಟ್ಟಿ, ಪ್ರಭು ಹೂಗಾರ, ಗೂಳಪ್ಪಾ ಹೊಸಮನಿ ಮತ್ತಿತರರು ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ