Kannada NewsKarnataka NewsLatest

*ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಸೆ.೧೦ರವರೆಗೂ ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಯಳಲ್ಲಿಯೂ ಇಂದು ಮಳೆಯಾಗಲಿದೆ.

Related Articles

Back to top button