Karnataka NewsLatest

*ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ರಣಮಳೆಯಾಗುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button