Karnataka News

*RAIN ALERT: ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ-ಗುಡುಗು-ಭಾರಿ ಮಳೆ ಎಚ್ಚರಿಕೆ!*

ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸಾರ್ವಜನಿಕರಿಗೆ ಸೂಚನೆ

Home add -Advt

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಅದರಲ್ಲಿಯೂ ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ, ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಟ್ಟೆಚ್ಚರಕ್ಕೆ ಸೂಚಿಸಿದೆ.

ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮನೆಯಲ್ಲಿಯೇ ಇರುವಂತೆ ಹಾಗೂ ವಿದ್ಯುತ್ ಉಪಕರಣಗಳಿಂದ ದೂರವಿರುವಂತೆ ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಗುಲಬರ್ಗ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಲಿದೆ.

ಕೆಲ ಪ್ರದೇಶಗಳಲ್ಲಿ ತಾತ್ಕಾಲಿಕ ವಿದ್ಯುತ್ ವ್ಯತ್ಯಯವಾಗಲಿದೆ. ಮರದ ಕೊಂಬೆಗಳು ಬೀಳುವ ಸಾಧ್ಯತೆ ಇದೆ. ಜನರು ಮನೆಯಲ್ಲಿಯೇ ಇದ್ದು, ಕಿಟಕಿ ಹಾಗೂ ಬಾಗಿಲನ್ನು ಮುಚ್ಚಿ, ಸಾಧ್ಯವಾದರೆ ಪ್ರಯಾಣ ಮಾಡುವುದನ್ನು ತಪ್ಪಿಸಿ. ಸುರಕ್ಷಿತ ಆಶ್ರಯ ಪಡೆಯಿರಿ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಎಲೆಕ್ಟ್ರಿಕ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ತಕ್ಷಣ ಅನ್ ಪ್ಲಗ್ ಮಾಡಿ, ವಿದ್ಯುತ್ ಚ್ಛಕ್ತಿ ನಡೆಸುವ ಎಲ್ಲಾ ವಸ್ತುಗಳಿಂದ ದೂರವಿರಿ. ಜಲಮೂಲಗಳಿಂದ ತಕ್ಷಣ ಹೊರಬನ್ನಿ. ಪ್ರಯಾಣ ಮಾಡುತ್ತಿದ್ದರೆ ಎಚ್ಚರಿಕೆ ಇರಲಿ ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.

Related Articles

Back to top button