Kannada NewsKarnataka News

*6 ಜಿಲ್ಲೆಗಳಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆದಿದ್ದರೆ ಮತ್ತೆ ಕೆಲ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಆರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ವಾತಾವರಣವಿರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು. ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯನಗರ, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ.

ಯಾದಗಿರಿ, ಬೀದರ್, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Related Articles

Back to top button