Belagavi NewsBelgaum NewsKannada NewsKarnataka NewsNationalTravel

*ಬೆಳಗಾವಿ–ಸಿಕಂದರಾಬಾದ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರು ಬೆಳಗಾವಿ ರೈಲು ನಿಲ್ದಾಣದಲ್ಲಿ ರೈಲು ಸಂಖ್ಯೆ 17074 ಬೆಳಗಾವಿ–ಸಿಕಂದರಾಬಾದ್ ವಾರಾಂತ್ಯ ಎಕ್ಸ್‌ಪ್ರೆಸ್ ರೈಲಿಗೆ ಸೇವೆಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಗದೀಶ ಶೆಟ್ಟರ ಅವರು, ಈ ಹೊಸ ರೈಲು ಸೇವೆಯಿಂದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳ ನಡುವಿನ ರೈಲು ಸಂಪರ್ಕ ಮತ್ತಷ್ಟು ಬಲಪಡಲಿದ್ದು, ಪರಸ್ಪರ ಆರ್ಥಿಕ ಬಲವರ್ಧನೆಗೂ ಸಹಕಾರಿಯಾಗುವುದರೊಂದಿಗೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.

ಉದ್ಘಾಟನೆಗೊಂಡ ಸಂಖ್ಯೆ 17074 ಬೆಳಗಾವಿ–ಸಿಕಂದರಾಬಾದ್ ವಾರಾಂತ್ಯ ಎಕ್ಸ್‌ಪ್ರೆಸ್ ರೈಲು ಇಂದಿನಿಂದ ನಿಯಮಿತ ಸಂಚಾರ ಆರಂಭಿಸಲಿದೆ. ರೈಲು ಪ್ರತಿ ಮಂಗಳವಾರ ಮಧ್ಯಾಹ್ನ 01:00 ಗಂಟೆಗೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 07:15 ಗಂಟೆಗೆ ಸಿಕಂದರಾಬಾದ್ ತಲುಪಲಿದೆ. ಮರಳಿ ರೈಲು ಸಂಖ್ಯೆ 17073 ಸಿಕಂದರಾಬಾದ್–ಬೆಳಗಾವಿ ವಾರಾಂತ್ಯ ಎಕ್ಸ್‌ಪ್ರೆಸ್ ಪ್ರತಿ ಸೋಮವಾರ ಸಿಕಂದರಾಬಾದ್‌ನಿಂದ 04:30 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 10:30 ಗಂಟೆಗೆ ಬೆಳಗಾವಿಗೆ ತಲುಪಲಿದೆ.

ಈ ಚಾಲನಾ ಸಮಾರಂಭದಲ್ಲಿ ಗೌರವಾನ್ವಿತ ಶಾಸಕರಾದ ಅಭಯ ಪಾಟೀಲ ಹಾಗೂ ಮಾಜಿ ಶಾಸಕ ಅನೀಲ ಬೆನಕೆ, ವಿಭಾಗೀಯ ರೈಲ್ವೆ ಹೆಚ್ಚುವರಿ ವ್ಯವಸ್ಥಾಪಕರಾದ ಪ್ರೇಮಚಂದ್ರ ಹಾಗೂ ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button