ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತೆ ಮುಂದುವರೆದಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಇಂದಿನಿಂದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಹಾಗೂ ದಕ್ಷಿನ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ.
ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ಮಧ್ಯ ಕರ್ನಾಟದ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದ್ದು, ಅಕ್ಟೋಬರ್ 10ರಂದು ಗುಲ್ಬರ್ಗ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಕೊಪ್ಪಳದಲ್ಲಿ ಭಾರಿ ಮಳೆಯಾಗಲಿದೆ.
ಬಂಗಾಳಕೊಲ್ಲಿಯಲ್ಲಿ ಸಮುದ್ರದ ಭಾಗದ ಆಂಧ್ರ ಪ್ರದೇಶದ ಉತ್ತರ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ದಕ್ಷಿಣ ಕರಾವಳಿಯತ್ತ ಸಾಗಿದೆ. ಇನ್ನೊಂದೆಡೆ ಬಂಗಾಳಕೊಲ್ಲಿಯ ಪಶ್ಚಿಮ ಸಮುದ್ರಭಾಗದಲ್ಲಿ ಉಂಟಾಗಿದ್ದ ಮತ್ತೊಂದು ಮೇಲ್ಮೈ ಸುಳಿಗಾಳಿ ದುರ್ಬಲಗೊಂಡಿಲ್ಲ ಈ ಕಾರಣಕ್ಕೆ ಕರ್ನಾಟಕದ ಒಳನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭೀಕರ ಅಪಘಾತ: ಏಕಾಏಕಿ ಹೊತ್ತಿ ಉರಿದ ಬಸ್; 11 ಪ್ರಯಾಣಿಕರು ಸಜೀವದಹನ
https://pragati.taskdun.com/latest/nasikbus-accidentfire11-death/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ