ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಕೊಡಗೂ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ. ಅಲ್ಲದೇ ಮುಂದಿನ 48 ಗಂಟೆ ಭಾರಿ ಮಳೆಯಾಗಲಿದೆ.
ಈಗಾಗಲೇ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ಥವ್ಯಸ್ಥಗೊಂಡಿದೆ. ದಕ್ಷಿಣ ಕನ್ನಡದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿದಾಗಿ ರಸ್ತೆಗಳು, ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಇಂದು ಕೂಡ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಮುಂಜಾನೆಯೇ ಜಿಟಿ ಜಿಟಿ ಮಳೆ ಶುರುವಾಗಿದೆ. ಜುಲೈ 2ರಿಂದ 4ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಮಳೆಯ ಆರ್ಭಟದ ನಡುವೆ ಕೊಡಗು, ದಕ್ಷಿಣ ಕನ್ನಡ ಭಾಗಗಳಲ್ಲಿ ಭೂ ಕಂಪವಾಗಿದೆ. ಕೊಡಗಿನ ಚೆಂಬು, ಪೆರಾಜೆ, ಕರಿಕೆ, ಸಂಪಾಜೆ ಹಾಗೂ ದಕ್ಷಿಣ ಕನ್ನಡದ ಸುಳ್ಯ, ಕಲ್ಲುಗುಂಡಿ ಭಾಗದಲ್ಲಿ ಭೂಕಂಪವಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.
ಬೀದಿ ನಾಯಿ ಕಚ್ಚಿದ್ದಕ್ಕೆ ಲಸಿಕೆ ಪಡೆದರೂ ಬದುಕುಳಿಯದ ವಿದ್ಯಾರ್ಥಿನಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ