Kannada NewsKarnataka NewsLatest

*ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ: 17 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಲಿದ್ದು, 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮತ್ತು 2 ಜಿಲ್ಲೆಗಳಲ್ಲಿ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ.

ಮುಂದಿನ 48 ಗಂಟೆ ಕಾಲ ಬೆಂಗಳೂರಲ್ಲಿ ಸಾಧಾರಣ ಮಳೆ ಸಾಧ್ಯತೆ ಇದ್ದು, ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ದಾವಣಗೆರೆ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಅಗ್ಳೂರಿನಲ್ಲಿ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button