Karnataka News

*ಮತ್ತೆ ಜೋರಾಗಲಿದೆ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆಯ ಅಬ್ಬರ ಹಲವೆಡೆ ಅವಘಡ ಸೃಷ್ಟಿಸಿದೆ. ಈ ನಡುವೆ ಕರ್ನಾಟಕದಲ್ಲಿ ಮತ್ತೆ ವರುಣಾರ್ಭಟ ಜೋರಾಗಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಉಪಸಾಗರ ಒಡಿಶಾ ಕರಾವಳಿಯಲ್ಲಿ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ. ಇದರ ಪರಿಣಾಮ ಕರ್ನಾಟಕದ ಮೇಲೂ ಬೀರಲಿದ್ದು, ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮತ್ತೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Home add -Advt

ಇಂದಿನಿಂದ ಮೇ 30ರವರೆಗೆ ರಾಜ್ಯದಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಅದರಲ್ಲಿಯೂ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಮುಂಜಾಗೃತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಲಾಗಿದೆ.

ಧಾರವಾಡ, ಬೆಳಗಾವಿ, ಹಾಸನ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಈ ತಿಂಗಳ ಅಂತ್ಯದವರೆಗೂ ಮಳೆಯಾಗಲಿದೆ. ಮೇ 31ರಿಂದ ರಾಜ್ಯದಲ್ಲಿ ಮಳೆಯ ಅಬ್ಬರ ತಗ್ಗಲಿದೆ ಎಂದು ತಿಳಿಸಿದೆ.

Related Articles

Back to top button