Kannada NewsKarnataka NewsLatest

*ಭಾರಿ ಮಳೆ ಎಚ್ಚರಿಕೆ: ರಾಜ್ಯಾದ್ಯಂತ ಎರಡು ದಿನ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಬಳ್ಳಾರಿ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ.

ರಾಜ್ಯಾದ್ಯಂತ ಮಳೆ ಅಬ್ಬರ ಇನ್ನಷ್ಟು ಹೆಚ್ಚಲಿದ್ದು, ಜೂನ್ 9 ಮಂಗಳವಾರ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಿಗೆ ಮತ್ತು ಜೂನ್ 10 ಬುಧವಾರ ರಾಜ್ಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Home add -Advt

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಜೂನ್ 9ರ ಮಂಗಳವಾರದಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಜೂನ್ 10ರ ಬುಧವಾರದಂದು ಕರ್ನಾಟಕದಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.


Related Articles

Back to top button