Kannada NewsKarnataka NewsLatest

*ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಿದ್ದು, ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಗಾಸಾ ಚಂಡ ಮಾರುತದ ಪರಿಣಾಮ ವಾಯುಭಾರ ಕುಸಿತವಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು, ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ಘೋಷಿ೮ಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ, ಮಳೆಯಾಗಲಿದೆ. ಸೆಪ್ಟೆಂಬರ್ 30ರವರೆಗೆ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು, ಹಾವೇರಿ, ಧಾರವಾಡ, ಚಿತ್ರದುರ್ಗ, ದಾವಘೆರೆ, ಕೋಲಾರ, ರಾಮನಗರ, ಮೈಸೂರು, ಚಾಮರಾಜನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

Home add -Advt

ಉತ್ತರ ಕರ್ನಾಟಕದ ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ರಾಯಚೂರು, ಕೊಪ್ಪಳ, ವಿಜಯನಗರ, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.


Related Articles

Back to top button