Karnataka News

*ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ ರಾವ್ ಪ್ರಮಾಣವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ನ್ಯಾಯಮೂರ್ತಿ ವಲ್ಲೂರಿ ಕಾಮೇಶ್ವರ ರಾವ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.

ಇಂದು ರಾಜಭವನದ ಗಾಜಿನಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಿಗೆ ರಾಜ್ಯದ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅವರು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯ ನ್ಯಾಯಮೂತಿಗಳಾದ ನಿಲಯ್ ವಿಪಿನ್‍ಚಂದ್ರ ಅಂಜಾರಿಯಾ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ರಜನೀಶ್ ಗೋಯಲ್ ಸೇರಿದಂತೆ ನ್ಯಾಯಮೂತಿಗಳು, ವಕೀಲರು, ಗಣ್ಯರುಗಳು ಉಪಸ್ಥಿತರಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button