Kannada NewsKarnataka NewsLatest

*ಮತ್ತೆ ಚುರುಕುಗೊಂಡ ಮುಂಗಾರು: ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಮಾಳೆಯಾಗಲಿದೆ ಎಂದು ಹವಾಅಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

Home add -Advt

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಬೀಸಲಿದೆ.

ನಾಳೆ ಜುಲೈ 21ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಧ್ಯಮ ಪ್ರಮಾಣದ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಗಾಳಿ-ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಕರಾವಳಿ ಮತ್ತು ಗಿರಿಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಲಾಪಾತಗಳು, ಸಮುದ್ರ ತೀರದ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರೈತರು ಬೆಳೆಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.


Related Articles

Back to top button