Latest

ಕ್ಷಣ ಕ್ಷಣದ ಮಾಹಿತಿ ವಿನಿಮಯ: ಕರ್ನಾಟಕ-ಮಹಾರಾಷ್ಟ್ರ ನಿರ್ಧಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣಾ ಸಮಿತಿಯ ಸಭೆಯಲ್ಲಿ ನೀರು ಬಿಡುಗಡೆ ಬಗ್ಗೆ ತಕ್ಷಣ ಮಾಹಿತಿ ನೀಡಲು ಮಹಾರಾಷ್ಟ್ರ ಸರ್ಕಾರ ಸಮ್ಮತಿ ಸೂಚಿಸಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದು, ಕೃಷ್ಣಾ ಹಾಗೂ ಭೀಮಾ ಜಲಾನಯನ ಪ್ರದೇಶದಲ್ಲಿ ಪರಿಣಾಮಕಾರಿಯಾಗಿ ಪ್ರವಾಹ ನಿರ್ವಹಣೆ ಕುರಿತಾಗಿಯೂ ಚರ್ಚೆ ನಡೆಯಿತು.

ಸಭೆಯ ಮುಖ್ಯಾಂಶಗಳು:
* ಉಬಯ ರಾಜ್ಯಗಳ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣೆ ಕುರಿತು ಸಮರ್ಪಕ ಮಾಹಿತಿ ವಿನಿಮಯ

*ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶದಲ್ಲಿ ಪರಿಣಾಮಕಾರಿ ಪ್ರವಾಹ ನಿರ್ವಹಣೆಯ ಕುರಿತ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.

*ಎರಡೂ ರಾಜ್ಯಗಳ ನಡುವೆ ಸಚಿವರು, ಕಾರ್ಯದರ್ಶಿಗಳ ಹಂತ ಹಾಗೂ ತಳಹಂತದ ಅಧಿಕಾರಿಗಳ ನಡುವೆ ಉತ್ತಮ ಸಂವಹನ, ಸಮನ್ವಯ ನಿರ್ವಹಿಸಲು ತೀರ್ಮಾನಿಸಲಾಯಿತು.

*ಎರಡೂ ರಾಜ್ಯಗಳ ನಡುವೆ ಮಳೆಯ ಪ್ರಮಾಣ, ಜಲಾಶಯಗಳಿಂದ ನೀರು ಬಿಡುಗಡೆ ಕುರಿತಂತೆ ಕ್ಷಣ ಕ್ಷಣದ ಮಾಹಿತಿ ಹಂಚಿಕೊಳ್ಳಲು ತೀರ್ಮಾನಿಸಲಾಯಿತು.

* ದೂಧ್ ಗಂಗಾ ಯೋಜನೆಯನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಒಪ್ಪಿಕೊಂಡಿದೆ. ಇದರಿಂದ ಈ ಭಾಗದ ಜನರ ನೀರಾವರಿ ಸೌಲಭ್ಯ ಹೊಂದುವ ಆಕಾಂಕ್ಷೆ ನೆರವೇರಲಿದೆ.

* ಇದರೊಂದಿಗೆ ಬೇಸಿಗೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ 4 ಟಿಎಂಸಿ ನೀರು ಹಾಗೂ ಮಳೆಗಾಲದಲ್ಲಿ ಮಹಾರಾಷ್ಟ್ರಕ್ಕೆ ರಾಜ್ಯದಿಂದ ಅಷ್ಟೇ ಪ್ರಮಾಣದ ನೀರು ಒದಗಿಸುವ ಬಗ್ಗೆ ತಾಂತ್ರಿಕ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಮಹಾರಾಷ್ಟ್ರ ರಾಜ್ಯದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್, ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಜಲಸಂಪನ್ಮೂಲ ಇಲಾಖೆಯ ಅಪರಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕರ್ನಾಟಕ ಮತ್ತು ಮಹಾರಾಷ್ಟ್ರದ ರಾಜ್ಯ ಸರ್ಕಾರಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಕೊರೊನಾ 3ನೇ ಅಲೆ ಖಚಿತ; ಏಮ್ಸ್ ಮುಖ್ಯಸ್ಥರ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button