ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ, ಹಿರಿಯ ನ್ಯಾ.ಮುಕುಲ್ ರೋಹ್ಟಗಿ ಅವರನ್ನು ಭೇಟಿಯಾಗಿ ಗಡಿ ವಿವಾದ ವಿಚಾರದ ಬಗ್ಗೆ ಕಾನೂನು ಸಲಹೆ ಪಡೆದರು.
ಈ ವೇಳೆ ಮಾತನಾಡಿದ ಸಿಎಂ, ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಣೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಹಿರಿಯ ನ್ಯಾ.ಮುಕುಲ್ ರೋಹ್ಟಗಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ಗಡಿ ವಿವಾದ ಬಗ್ಗೆ ಸಾಕಷ್ಟು ಮಾಹಿತಿ ನೀಡಲಾಗಿದೆ. ಸುಪ್ರೀಂ ಕೋರ್ಟ್ ನಲ್ಲಿ ನಾವು ಸಮರ್ಥವಾಗಿ ವಾದ ಮಂಡಿಸುವ ವಿಶ್ವಾಸವಿದೆ ಎಂದರು.
ಇನ್ನು ಮಹಾರಾಷ್ಟ್ರದ ಜತ್ ತಾಲೂಕಿನ 42 ಹಳ್ಳಿಗಳ ಜನರು ಕರ್ನಾಟಕ್ಕೆ ಬರುವುದಾಗಿ ಹೇಳುತ್ತಿದ್ದಾರೆ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸೇರಲು ಕೆಲ ಕಾನೂನು ನಿಯಮಗಳಿವೆ. ಎಲ್ಲವನ್ನೂ ಕಾನೂನು ಅಡಿಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಮೂಲಸೌಕರ್ಯ ಸಿಗದಿದ್ದ ಬಗ್ಗೆ ಆ ತಾಲೂಕಿನ ಜನರು ಹಲವು ವರ್ಷಗಳಿಂದ ಸಂಕಷ್ಟ ಪಡುತ್ತಿದ್ದಾರೆ. ಹೀಗಾಗಿ ಕರ್ನಾಟಕ್ಕೆ ಬರುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಈ ನಿಟ್ಟಿನಲ್ಲಿಯೂ ನ್ಯಾಯಾಲಯದಲ್ಲಿ ಪ್ರಸ್ತಾಪ ಮಾಡಲಾಗುವುದು ಎಂದರು.
ಹನಿಟ್ರ್ಯಾಪ್ ಜಾಲಕ್ಕೆ ಬಿದ್ದ ಟೆಕ್ಕಿ; ಕೆಲಸ, ಹೆಂಡತಿ-ಮಕ್ಕಳನ್ನೂ ಕಳೆದುಕೊಂಡು ಕಣ್ಣೀರು
https://pragati.taskdun.com/honey-traptechieloose-jobwife/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ