Kannada NewsLatest

ನಿಮ್ಮ ಭಾಗದಲ್ಲಿ ಶಾಂತಿ-ಸೌಹಾರ್ದತೆ ನೀವು ಕಾಪಾಡಿಕೊಳ್ಳಿ, ನಮ್ಮ ಭಾಗದಲ್ಲಿ ನಾವು ನೋಡಿಕೊಳ್ಳುತ್ತೇವೆ; ಖಡಕ್ ಸಂದೇಶ ರವಾನಿಸಿದ ಸಿಎಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ನೀತಿಯನ್ನು ಸ್ಪಷ್ಟವಾಗಿ ಪ್ರಕಟಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕನ್ನಡಿಗರ ರಕ್ಷಣೆ, ಅಲ್ಲಿನ ಆಸ್ತಿ ಪಾಸ್ತಿ ರಕ್ಷಣೆ ಮಾಡುವ ಸಲುವಾಗಿ ಕ್ರಮವಹಿಸಿದ್ದು, ಮಹಾರಾಷ್ಟ್ರ ಡಿಜಿಪಿ ಹಾಗೂ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದೇವೆ ಎಂದರು.

ಕರ್ನಾಟಕದಲ್ಲಿಯೂ ಕೂಡ ಸಂಪುರ್ಣ ಬಂದೋಬಸ್ತ್ ಮಾಡಲಾಗಿದೆ. ನಾನೂ ಕೂಡ ಭಾಜಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತನಾಡಿದ್ದು, ಕನ್ನಡ ನಾಡಿನ ನಿಲುವನ್ನು ಸ್ಪಷ್ಟಪಡಿಸಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಎರಡೂ ಕಡೆ ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಹೇಳಿದ್ದಾರೆ. ನಿಮ್ಮ ಭಾಗದಲ್ಲಿ ಶಾಂತಿ ಸೌಹಾರ್ದತೆಯನ್ನು ನೀವು ಕಾಪಾಡಿಕೊಳ್ಳಿ, ನಮ್ಮ ಭಾಗದಲ್ಲಿ ನಾವು ನೋಡಿಕೊಳ್ಳುತ್ತೇವೆ ಎಂದು ತಿಳಿಸಲಾಗಿದೆ. ಯಾವುದೇ ಕಾರಣಕ್ಕೂ ಆ ಕಡೆಯಿಂದ ಪ್ರಚೋದನೆಯಾಗಕೂಡದು ಎಂದು ಆಗ್ರಹಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಅಮಿತ್ ಶಾ, ಅವರಾಗಲಿ ಬೇರ್ಯಾರೂ ನನ್ನ ಬಳಿ ಈ ಕುರಿತು ಮಾತನಾಡಿಲ್ಲ ಎಂದು ತಿಳಿಸಿದರು.

Home add -Advt

 

ಗುಜರಾತ್ ನಲ್ಲಿ BJP ಪ್ರಚಂಡ ಗೆಲುವು: ಡಿಸೆಂಬರ್ 12ರಂದು ಸಿಎಂ ಪ್ರಮಾಣವಚನ

 

https://pragati.taskdun.com/gujarathelectionbjp-winbhupendra-pateloath/

Related Articles

Back to top button