ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಗಡಿ ವಿವಾದ ಕುರಿತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೀಡಿರುವ ಹೇಳಿಕೆ ಕುರಿತು ಚರ್ಚಿಸಲು ಮುದಿನ ವಾರ ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆ ನೀಡಿರುವುದನ್ನು ಗಮನಿಸಿದ್ದೇನೆ. ಈ ವಿಚಾರ ಚರ್ಚಿಸಲು ಮುಂದಿನ ವಾರ ಸರ್ವಪಕ್ಷೆ ಸಭೆ ಕರೆಯಲಾಗಿದೆ ಎಂದರು.
ಗಡಿವಿವಾದವೇ ಮುಗಿದುಹೋಗಿದೆ. ಆದರೆ ಮಹಾರಾಷ್ಟ್ರ ಸರ್ಕಾರವೇ ಗಡಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಿದೆ. ವಾದ ಮಂಡನೆಗೆ ನಾವು ಸಮರ್ಥವಾಗಿ ತಯಾರಿಯನ್ನೂ ಮಾಡಿಕೊಂಡಿದ್ದೇವೆ. ಈ ಮಧ್ಯೆ ಮಾತುಕತೆ ನಡೆಸುವ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಈ ಹಿಂದಿನ ಸರ್ವಪಕ್ಷಗಳ ಸಭೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸುವ ಬಗ್ಗೆ ನಾವು ನಿರ್ಣಯ ಕೈಗೊಂಡಿದ್ದೆವು. ಹಾಗಾಗಿ ಸಧ್ಯ ನಮಗೆ ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸಬೇಕು ಎಂಬ ಉದ್ದೇಶವಿದೆ. ಈಗ ಮಾತುಕತೆ ಬಗ್ಗೆ ಏಕನಾಥ್ ಶಿಂದೆ ಹೇಳಿಕೆಕೊಟ್ಟಿದ್ದಾರೆ. ಅವರ ಹೇಳಿಕೆಗಳ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಮತ್ತೊಮ್ಮೆ ಚರ್ಚಿಸಲಾಗುವುದು ಎಂದು ಹೇಳಿದರು.
ಇನ್ನು ಜತ್ ತಾಲೂಕು ಕರ್ನಾಟಕಕ್ಕೆ ಸೇರಿಸುವ ಬಗ್ಗೆ ನಿರ್ಣಯವಾಗಿದೆ. ಜತ್ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳು ಈ ಬಗ್ಗೆ ನಿರ್ಧರಿಸಿವೆ. ಇವೆಲ್ಲವೂ ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡನೆ ವೇಳೆ ಬರಲಿವೆ ಎಂದು ಹೇಳಿದರು.
ರಿಯಲ್ ಸ್ಟಾರ್ ಉಪೇಂದ್ರ ಆಸ್ಪತ್ರೆಗೆ ದಾಖಲು
https://pragati.taskdun.com/sandalwoodupendrahealth-issuehospitalized/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ