LatestUncategorized

ಕರ್ನಾಟಕ ಬಸ್ ಅಡ್ಡಗಟ್ಟಿ ಪುಂಡಾಟ ಮೆರೆದ ಮರಾಠಿ ಕಾರ್ಯಕರ್ತರು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರ ಮತ್ತೆ ಚರ್ಚೆಗೆ ಬರುತ್ತಿದ್ದಂತೆ ಮರಾಠಿಗರು ಕರ್ನಾಟಕದ ಬಸ್ ಗಳ ಮೇಲೆ ಪುಂಡಾಟ ಮೆರೆದಿದ್ದಾರೆ.

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿ ಕರ್ನಾಟಕದ ಬಸ್ ಅಡ್ಡಗಟ್ಟಿದ ಅಖಿಲ ಭಾರತ ಮರಾಠಾ ಸಂಘದ ಕಾರ್ಯಕರ್ತರು ಬಸ್ ಗೆ ಕಪ್ಪು ಮಸಿ ಬಳಿದು, ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ್ದಾರೆ.

ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಪ್ಪಾಣಿ ಡಿಪೋಗೆ ಸೇರಿದ ಬಸ್ಸೊಂದನ್ನು ದೌಂಡ್ ಗ್ರಾಮದಲ್ಲಿ ಅಡ್ಡಗಟ್ಟಿದ ಮರಾಠಿ ಸಂಘದ ಕಾರ್ಯಕರ್ತರು ಬಸ್ ಮೇಲೆ ಜೈ ಮಹಾರಾಷ್ಟ್ರ ಎಂದು ಕಪ್ಪು ಮಸಿಯಲ್ಲಿ ಬರೆದಿದ್ದಾರೆ. ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೊಲೆ ಯತ್ನ ಆರೋಪ: JDS ಶಾಸಕನ ವಿರುದ್ಧ ದೂರು ದಾಖಲು

Home add -Advt

https://pragati.taskdun.com/mla-gouri-shankarsuresh-gowdacomplaint-file/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button