ಪ್ರಗತಿವಾಹಿನಿ ಸುದ್ದಿ; ಮುಂಬೈ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಜಲ ವಿವಾದ ಸೃಷ್ಟಿಸಲು ಮುಂದಾಗಿದೆ. ಕರ್ನಾಟಕಕ್ಕೆ ಮಹಾರಾಷ್ಟ್ರ ಡ್ಯಾಂ ನಿಂದ ನೀರು ಬಿದದಂತೆ ಎನ್ ಸಿಪಿ ಶಾಸಕ ಜಯಂತ್ ಪಾಟೀಲ್ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಮಹಾರಷ್ಟ್ರ ಅಧಿವೇಶನದಲ್ಲಿ ಗಡಿ ವಿವಾದದ ಚರ್ಚೆ ನಡೆದಿದ್ದು, ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸೊಕ್ಕು. ಸಿಎಂ ಬೊಮ್ಮಾಯಿ ಯಾವ ಭಾಷೆಯಲ್ಲಿ ಮಾತನಾಡುತ್ತಾರೋ ಅದೇ ಭಾಷೆಯಲ್ಲೇ ಉತ್ತರ ಕೊಡಬೇಕಿದೆ. ಕರ್ನಾಟಕಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದ್ದಾರೆ.
ಕರ್ನಾಟಕಕ್ಕೆ ಮಹಾರಾಷ್ಟ್ರದಿಂದ ನೀರು ಬಿಡಬಾರದು. ಈ ನಿಟ್ಟಿನಲ್ಲಿ ಕೊಯ್ನಾ, ಕೊಲ್ಹಾಪುರ ಜಿಲ್ಲೆಯ ಡ್ಯಾಂ ಗಳ ಎತ್ತರ ಹೆಚ್ಚಿಸಬೇಕು. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ನೀರು ಬಂದ್ ಮಾಡಬೇಕು ಎಂದು ಹೇಳಿದ್ದಾರೆ. ಈ ಮೂಲಕ ಮತ್ತೊಂದು ವಿವಾದ ಸೃಷ್ಟಿಸಲು ಎನ್ ಸಿಪಿ ಶಾಸಕ ಮುಂದಾಗಿದ್ದಾರೆ.
*ಮಾತಿಗೆ ತಪ್ಪುವ ರೀತಿ ನಡೆದುಕೊಳ್ಳುತ್ತಿದ್ದಾರೆ; ಮೀಸಲಾತಿ ಘೋಷಿಸದಿದ್ದರೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ*
https://pragati.taskdun.com/panchamasali2a-reservationbasava-jayamrutyunjaya-swamijibelagavi/
*ಕಾರಿನೊಳಗೇ ಆತ್ಮಹತ್ಯೆಗೆ ಶರಣಾದ ಟೆಕ್ಕಿ*
https://pragati.taskdun.com/techeesuiidein-carbangalore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ