ಪ್ರಗತಿವಾಹಿನಿ ಸುದ್ದಿ; ಮುಂಬೈ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಗಡಿ ವಿವಾದ ಆರಂಭಿಸಿದ್ದೇ ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಗಂಭೀರ ಆರೋಪ ಮಾಡಿದ್ದಾರೆ.
ಮುಂಬೈನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರದ್ ಪವಾರ್, ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಹೇಳಿಕೆಗಳಿಂದಲೇ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ.
ಗಡಿ ವಿವಾದ ವಿಚಾರವಾಗಿ ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶ ಮಾಡಬೇಕು. ಇಲ್ಲವಾದಲ್ಲಿ ಈ ರೀತಿ ಘಟನೆಗಳು ದೇಶಕ್ಕೆ ಮಾರಕ ಎಂದು ಎಚ್ಚರಿಸಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಶಾಂತವಾತಾವರಣ ನಿರ್ಮಾಣ ಮಾಡಲಿ. ಇಲ್ಲವಾದರೆ ನಾವೂ ತಾಳ್ಮೆ ಕಳೆದುಕೊಳ್ಳಬೇಕಾಗುತ್ತದೆ. ಅನಾಹುತವಾದರೆ ಸಿಎಂ ಬೊಮ್ಮಾಯಿ ಅವರೇ ನೇರ ಹೊಣೆ ಎಂದು ಬೆದರಿಕೆ ಹಾಕಿದ್ದಾರೆ.
ಮುಂದಿನ 48 ಗಂಟೆಗಳಲ್ಲಿ ಪ್ರಕರಣ ಮುಗಿಯದಿದ್ದರೆ ನಾನೇ ಬೆಳಗಾವಿಗೆ ಹೋಗಬೇಕಾಗುತ್ತದೆ. ಎಂಇಎಸ್ ನಾಯಕರನ್ನು ಭೇಟಿಯಾಗಿ ಅವರ ಸಮಸ್ಯೆಯನ್ನು ತಿಳಿದುಕೊಳ್ಳುತ್ತೇನೆ ಎಂದಿದ್ದಾರೆ.
ರಣಾಂಗಣವಾದ ಹಿರೇಬಾಗೆವಾಡಿ ರಸ್ತೆ; ಮಹಾರಾಷ್ಟ್ರ ವಾಹನಗಳ ಮೇಲೆ ಕರವೇ ಕಲ್ಲುತೂರಾಟ
https://pragati.taskdun.com/belagavihirebagewadikarave-protest/
KSRTC ಬಸ್, ಕಾರುಗಳ ಮೇಲೆ ಶಿವಸೇನೆ ಕಾರ್ಯಕರ್ತರಿಂದ ಕಲ್ಲು ತೂರಾಟ
https://pragati.taskdun.com/karnataka-maharashtra-border-issueshivasena-activistattackksrtc-buscarpune/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ