ಪ್ರಗತಿವಾಹಿನಿ ಸುದ್ದಿ; ಪುಣೆ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕ್ಷಣ ಕ್ಷಣಕ್ಕೂ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಉಬಯ ರಾಜ್ಯಗಳ ನಡುವೆ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಕಾರ್ಯಕರ್ತರು ಕನ್ನಡಿಗರ ಸ್ವಾಭಿಮಾನ ಕೆಣಕಿದ್ದು, ಕೆ ಎಸ್ ಆರ್ ಟಿಸಿ ಬಸ್, ಕಾರು, ಖಾಸಗಿ ವಾಹನಗಳ ಮೇಲೆ ದಾಳಿ ನಡೆಸಿ ಕಲ್ಲು ತೂರಾಟ ನಡೆಸಿದ್ದಾರೆ.
ಮಹಾರಾಷ್ಟ್ರದ ಪುಣೆ ಡಿಪೋಗೆ ನುಗ್ಗಿರುವ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಕಾರ್ಯಕರ್ತರು, ಡಿಪೋದಲ್ಲಿ ನಿಂತಿದ್ದ 8 ಕೆ ಎಸ್ ಆರ್ ಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಸ್ ಗಾಜುಗಳು ಸಂಪೂರ್ಣ ಪುಡಿ ಪುಡಿ ಮಾಡಿದ್ದಾರೆ. ಬಸ್ ಗಳ ಮೇಲೆ ಮಸಿ ಬಳಿದು, ಜೈ ಮಹಾರಾಷ್ಟ್ರ ಎಂದು ಬರೆದು ಪುಂಡಾಟ ಮೆರೆದಿದ್ದಾರೆ.
ಪುಣೆ ರಸ್ತೆಗಳಲ್ಲಿ ಕರ್ನಾಟಕ ನೋಂದಣಿ ಇರುವ ಕಾರುಗಳು, ಇತರ ವಾಹನಗಳನ್ನು ತಡೆದು ದಾಳಿ ನಡೆಸಿ ಕರ್ನಾಟಕದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಸೇನೆ ಕಾರ್ಯಕರ್ತರ ಉದ್ಧಟತನದ ಬೆನ್ನಲ್ಲೇ ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಒಟ್ಟಾರೆ ಉಬಯ ರಾಜ್ಯಗಳ ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.
‘ಮಹಾ’ ಸಚಿವರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ
https://pragati.taskdun.com/home-minister-araga-jnanendrawarningmaharashtra-ministersbelagavi-visit/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ