ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕ್ಕೇರಿರುವ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ರಾಜ್ಯದ ಬಸ್ ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಜನರು ತಾಳ್ಮೆಯಿಂದ ಇರುವಂತೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಸ್ ಗಳ ಮೇಲೆ ಮಸಿ, ಕಲ್ಲು ತೂರಾಟದಂತಹ ಕೃತ್ಯ ಸರಿಯಲ್ಲ. ಎರಡೂ ರಾಜ್ಯಗಳ ಜನರು ಶಾಂತಿ ಕಾಪಾಡಬೇಕು. ಮಹಾರಾಷ್ಟ್ರದ ಗೃಹ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು. ನಮ್ಮ ಗೃಹ ಸಚಿವರಿಗೆ ಮಹಾರಾಷ್ಟ್ರದ ಗೃಹಸಚಿವರೊಂದಿಗೆ ಚರ್ಚಿಸುವಂತೆ ಸೂಚಿಸಿದ್ದೇನೆ. ಅಗತ್ಯ ಕ್ರಮ ಕೈಗೊಳ್ಳುವಂತೆಯೂ ತಿಳಿಸಲಾಗಿದೆ ಎಂದರು.
ಇದೇ ವೇಳೆ ವೋಟರ್ ಐಡಿ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಐಎ ಎಸ್ ಅಧಿಕಾರಿಗಳ ಅಮಾನತು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ, ಈಗಾಗಲೇ ಹಲವು ಜನರನ್ನು ಬಂಧಿಸಲಾಗಿದೆ. ಅಕ್ರಮ ಪ್ರಕರಣ ಸಂಬಂಧ ಅಧಿಕಾರಿಗಳನ್ನು ವಿಚಾರಣೆ ಮಾಡಲಾಗುತ್ತಿದೆ. ಮತ್ತೆ ಮತದಾರರ ಮಾಹಿತಿ ಸಂಗ್ರಹಿಸಲು ಚುನಾವಣಾ ಆಯೋಗ ಸೂಚಿಸಿದೆ. ಆಯೋಗದ ಕ್ರಮವನ್ನು ಸ್ವಾಗತಿಸುತ್ತೇನೆ. ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮಹಾರಾಷ್ಟ್ರದಲ್ಲಿ ರಾಜ್ಯದ ಬಸ್ ಗಳ ಮೇಲೆ ಕಲ್ಲು ತೂರಾಟ; ಸಂಚಾರ ಸ್ಥಗಿತ
https://pragati.taskdun.com/belagaviksrtc-busstone-throwkarnataka-maharashtra-border-issue/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ