ಅಧಿವೇಶನದಂದೇ ಬೆಳಗಾವಿಯಲ್ಲಿ ಮಹಾಮೇಳಾವ್ ಆಯೋಜಿಸಿದ MES; ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಗಡಿ ಉಸ್ತುವಾರಿ ಚಂದ್ರಕಾಂತ್ ಪಾಟೀಲ್, ಶಂಭುರಾಜ್ ದೇಸಾಯಿ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ಆಹ್ವಾನ
ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಗಡಿ ಉಸ್ತುವಾರಿ ಚಂದ್ರಕಾಂತ್ ಪಾಟೀಲ್, ಶಂಭುರಾಜ್ ದೇಸಾಯಿ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ಆಹ್ವಾನ
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನಲ್ಲೇ ಭಾಷಾದ್ವೇಷದ ಕಿಡಿ ಹೊತ್ತಿಸಲು ಎಂಇಎಸ್ ಮುಂದಾಗಿದ್ದು, ಕುಂದಾನಗರಿ ಬೆಳಗಾವಿಯಲ್ಲಿ ಮಹಾಮೆಳಾವ್ ಆಯೋಜನೆ ಮಾಡಿದೆ.
ಈ ಮೂಲಕ ಉರಿಯುವ ಬೆಂಕಿಗೆ ಇನ್ನಷ್ಟು ತುಪ್ಪ ಸುರಿಯುವ ಕೆಲಸ ಮಾಡಿದೆ. ಗಡಿ ವಿವಾದದಿಂದಾಗಿ ಬೆಳಗಾವಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಇಂತಹ ಸಂದರ್ಭದಲ್ಲೇ ಮಹಾಮೇಳಾವ್ ನಡೆಸಲು ಉದ್ದೇಶಿಸಿರುವ ಎಂಇಎಸ್, ಸಮಾವೇಶಕ್ಕೆ ಮಹಾರಾಷ್ಟ್ರ ಸಿಎಂ, ಶರದ್ ಪವಾರ್ ಹಾಗೂ ಸಚಿವರನ್ನು ಆಹ್ವಾನಿಸಿದೆ.
ಡಿಸೆಂಬರ್ 19ರಂದು ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಮಹಾಮೇಳಾವ್ ನಡೆಯಲಿದ್ದು, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ್ ಪಾಟೀಲ್, ಶಂಭುರಾಜ್ ದೇಸಾಯಿ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಆಹ್ವಾನಿಸಿದೆ. ಅಲ್ಲದೇ ಒಂದು ಪಕ್ಷದಿಂದ ತಲಾ ಒಬ್ಬರು ನಾಯಕರು ಮಹಾಮೇಳಾವ್ ಗೆ ಬರುವಂತೆ ಮನವಿ ಮಾಡಿದೆ.
ಡಿಸೆಂಬರ್ 19ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಡಿಸೆಂಬರ್ 29ರವರೆಗೆ ನಡೆಯಲಿದೆ. ಅಧಿವೇಶ ಆರಂಭದ ದಿನದಂದೇ ಎಂಇಎಸ್ ಬೆಳಗಾವಿಯಲ್ಲಿ ಮಹಾಮೇಳಾವ್ ಆಯೋಜಿಸಿ ಭಾಷಾ ಕಿಡಿ ಹೊತ್ತಿಸಲು ಮುಂದಾಗಿದೆ.
ಮಹಾಮೇಳಾವ್ ಸಮಾವೇಶ ನಡೆಸಲು ಎಂಇಎಸ್ ಈಗಾಗಲೇ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಅನುಮತಿಯನ್ನೂ ಕೋರಿದೆ. ಚುನಾವಣೆ ಹಿನ್ನೆಲೆಯಲ್ಲಿ ಈಬಾರಿ ಅದ್ಧೂರಿಯಾಗಿ ಮಹಾಮೇಳಾವ್ ನಡೆಸಲು ಉದ್ದೇಶಿಸಿದೆ. ಆದರೆ ಎಂಇಎಸ್ ಮಹಾಮೇಳಾವ್ ಗೆ ಅನುಮತಿ ಕೊಡದಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ.
https://pragati.taskdun.com/karnataka-state-government-has-given-good-news-to-its-employees/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ