
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಗಳೂರು-ಪುಣೆ ಹೆದ್ದಾರಿ ತಡೆದು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಕಿಡಿಗೇಡಿಗಳು ಕೆ ಎಸ್ ಆರ್ ಟಿಸಿ ಬಸ್ ಗೆ ಮಸಿ ಬಳಿದು, ಕಲ್ಲು ತೂರಾಟ ನಡೆಸಿದ್ದ ಪ್ರಕರಣ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಬೆಳಗಾವಿಯ ಮಹಾಂತೇಶ್ ನಗರದ ಬಳಿ ಬೆಂಗಳೂರು-ಪುಣೆ ಹೆದ್ದಾರಿ ತಡೆದ ಪ್ರತಿಭಟನಾಕಾರರು ಮಹಾರಾಷ್ಟ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೂಡ್ಸ್ ವಾಹನಗಳಿಗೆ ಮಸಿ ಬಳಿದು, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಪ್ರತಿಕೃತಿ ದಹನ ಮಾಡಿ ಮಹಾ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ ನಡೆದು ವಾಗ್ವಾದ ನಡೆದಿದೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಹಲವು ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯುವತಿಯ ಮತಾಂತರ; ಹೆಸರಾಂತ ವೈದ್ಯೆ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
https://pragati.taskdun.com/hindu-girlconvertionfir-filemangaloreladya-doctor/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ