ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದ್ದು, ಬೆಳಗಾವಿ ನಗರ ಹಾಗೂ ಗಡಿ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತಗೊಂಡಿದೆ.
ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ತೆರಳಬೇಕಿದ್ದ ಕೆ ಎಸ್ ಆರ್ ಟಿಸಿ ಬಸ್ ಗಳು ಹಾಗೂ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸಬೇಕಿದ್ದ ಸಾರಿಗೆ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಬೆಳಗಾವಿ ಪೊಲೀಸರ ಸೂಚನೆ ಮೇರೆಗೆ ಸಾರಿಗೆ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಕೆ ಎಸ್ ಆರ್ ಟಿಸಿ ಬಸ್ ಗಳ ಮೇಲೆ ಮಹಾರಾಷ್ಟ್ರದಲ್ಲಿ ಕಲ್ಲು ತೂರಾಟ ನಡೆಸಲಾಗುತ್ತಿದೆ. ಶಿವಸೇನೆ, ಎಂಇಎಸ್, ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರು ರಾಜ್ಯದ ಬಸ್, ಕಾರು ಸೇರಿದಂತೆ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ರೊಚ್ಚಿಗೆದ್ದಿರುವ ಕನ್ನಡಿಗರು ಮಹಾರಾಷ್ಟ್ರದ ವಿರುದ್ಧ ಸಿಡಿದೆದ್ದಿದ್ದಾರೆ.
ಉಭಯ ರಾಜ್ಯಗಳ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗೃತಾ ಕ್ರಮವಾಗಿ ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರಕ್ಕೆ ತೆರಳಬೇಕಿದ್ದ 150ಕ್ಕೂ ಹೆಚ್ಚು ಬಸ್ ಗಳು ಬೆಳಗಾವಿ ನಗರದಲ್ಲಿಯೇ ನಿತಿದೆ. ಇನ್ನು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರಬೇಕಿದ್ದ ಬಸ್ ಗಳು ಬಂದ್ ಆಗಿವೆ.
ಬಸ್ ಸಂಚಾರ ಸ್ಥಗಿತಗೊಂಡಿರುವುದರಿಂದ ಜನಸಾಮಾನ್ಯರು, ಪ್ರಯಾಣಿಕರು ಪರದಾಡುವಂತಾಗಿದೆ.
ಶಿವಸೇನೆ ಬಳಿಕ MNS ಪುಂಡಾಟ; KSRTC ಬಸ್ ಗಳ ಮೇಲೆ ದಾಳಿ
https://pragati.taskdun.com/karnataka-maharastra-border-issueksrtc-busmnsshivasene/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ