ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಹಿರೇಬಾಗೇವಾಡಿ ಪೊಲೀಸರು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರದ ಪುಂಡಾಟದ ವಿರುದ್ಧ ಕರವೇ ಕಾರ್ಯಕರ್ತರು ನಿನ್ನೆ ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮಹಾರಾಷ್ಟ್ರ ನೋಂದಣಿಯ ಲಾರಿಗಳ ಮೇಲೆ ಮಸಿ ಬಳಿದು, ಕಲ್ಲುತೂರಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ 8-12 ಕರವೇ ಕಾರ್ಯಕರ್ತರ ವಿರುದ್ಧ ಹಿರೆಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದ್ದು, ಎಫ್ ಐ ಆರ‍್ ದಾಖಲಿಸಲಾಗಿದೆ.
ಗುಂಪು ಕಟ್ಟಿ ಗಲಾಟೆ ಮಾಡಿದ್ದ ಆರೋಪದಡಿ ಪ್ರಕರಣ ದಾಖಲಾಗಿದ್ದು, ಐಪಿಸಿ ಸೆಕ್ಷನ್ 143, 147, 341, 427, 149ರ ಅಡಿ ಪ್ರಕರಣ ದಾಖಲಾಗಿದೆ.
20 ರಂದು ಮೂಡಲಗಿ ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಕಾರ್ಯ ಆರಂಭ
https://pragati.taskdun.com/the-registration-process-starts-at-mudalagi-sub-registration-office-on-20th-dec/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ