ಪ್ರಗತಿವಾಹಿನಿ ಸುದ್ದಿ; ಸೊಲ್ಲಾಪುರ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಅಲ್ಲಿನ ತಾಲೂಕುಗಳ ಜನರೇ ತಿರುಗಿ ಬಿದ್ದಿದ್ದಾರೆ. ತಾವು ಕರ್ನಾಟಕಕ್ಕೆ ಹೋಗುವುದಾಗಿ ಪಟ್ಟು ಹಿಡಿದಿದ್ದಾರೆ.
ಮಹಾರಾಷ್ಟ್ರದ ಜತ್ ತಾಲೂಕಿನ ಬೆನ್ನಲ್ಲೇ ಇದೀಗ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟ ತಾಲೂಕಿನ ಜನರು ಕೂಡ ತಾವು ಕರ್ನಾಟಕ್ಕ್ಕೆ ಹೋಗುವುದಾಗಿ ಘೋಷಿಸಿದ್ದಾರೆ.
5 ದಶಕಗಳಿಂದ ಮಹಾರಾಷ್ಟ್ರ ಸರ್ಕಾರ ಗಡಿ ಕನ್ನಡಿಗರಿಗೆ ಅನ್ಯಾಯ ಮಾಡುತ್ತಲೇ ಬಂದಿದೆ. ಕುಡಿಯುವ ನೀರು, ರಸ್ತೆ, ಕನ್ನಡ ಶಾಲೆಗಳಿಗೆ ಸೌಲಭ್ಯ ಸಿಕ್ಕಿಲ್ಲ. ಈ ಬಗ್ಗೆ ಸ್ಥಳೀಯ ಶಾಸಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಗಡಿ ಕನ್ನಡಿಗರು ದಿನದಿಂದ ದಿನಕ್ಕೆ ಸಮಸ್ಯೆಗಳು ಅನುಭವಿಸುತ್ತಿದ್ದಾರೆ. ಮಹಾಜನ್ ಆಯೋಗದ ವರದಿಯಂತೆ ನಾವೂ ಕರ್ನಾಟಕ್ಕೆ ಸೇರುತ್ತೇವೆ ಎಂದು ಪಟ್ತು ಹಿಡಿದಿದ್ದಾರೆ.
ಗಡಿ ಗ್ರಾಮಗಳ ಅಭಿವೃದ್ಧಿಗೆ ಮಹಾರಾಷ್ಟ್ರ ಸರ್ಕಾರ ತಕ್ಷಣ ಮುಂದಾಗಬೇಕು. ಇಲ್ಲವಾದಲ್ಲಿ ನಮ್ಮನ್ನು ಕರ್ನಾಟಕ್ಕೆ ಹೋಗಲು ಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ಗಡಿ ವಿವಾದ: ಸಿಎಂ ಬೊಮ್ಮಾಯಿ ದೆಹಲಿಗೆ ದೌಡು
https://pragati.taskdun.com/cm-basavaraj-bommaidelhi-visitcabinet-extention/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ