Belagavi NewsBelgaum NewsKannada NewsKarnataka NewsLatest

*ಕರ್ನಾಟಕ ವೈದ್ಯಕೀಯ ಕೋರ್ಸಗಳ ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತಿದ್ದುಪಡಿ ವಿಧೇಯಕಕ್ಕೆ ಪರಿಷತ್ ನಲ್ಲಿ ಅಂಗೀಕಾರ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2023ನೇ ಸಾಲಿನ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕಕ್ಕೆ ವಿಧಾನ ಪರಿಷತ್‌ನಲ್ಲಿ ಡಿಸೇಂಬರ್ 13ರಂದು ಅಂಗೀಕಾರ ದೊರೆಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿಧೇಯಕವನ್ನು ಪರ್ಯಾಲೋಸಬೇಕೆಂದು ಕೋರಿದರು. ಅದರಂತೆ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ವಿಧೇಯಕದ ಮೇಲೆ ಚರ್ಚೆಗೆ ಅವಕಾಶ ಕಲ್ಪಿಸಿದರು. ಚರ್ಚೆಯ ಬಳಿಕ ಸಭಾಪತಿಗಳು ವಿಧೇಯಕವನ್ನು ಮತಕ್ಕೆ ಹಾಕಿದರು. ಸದನ ಸದಸ್ಯರು ವಿಧೇಯಕಕ್ಕೆ ಒಪ್ಪಿಗೆ ಸೂಚಿಸಿದರು. ಆರೋಗ್ಯ ಸಚಿವರು ವಿಧೇಯಕವನ್ನು ಅಂಗೀಕರಿಸಲು ಕೋರಿದ ಬಳಿಕ ಸಭಾಪತಿಗಳು ವಿಧೇಯಕವು ಅಂಗೀಕಾರವಾಗಿದೆ ಎಂದು ಘೋಷಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button