Kannada NewsKarnataka NewsLatest

*ಯುವಕನ ಕಿರುಕುಳ; ಆತ್ಮಹತ್ಯೆಗೆ ಶರಣಾದ ಯುವತಿ*

ಪ್ರಗತಿವಾಹಿನಿ ಸುದ್ದಿ: ಪ್ರೀತಿಸುವಂತೆ ಯುವತಿಗೆ ಯುವಕನೊಬ್ಬ ನಿರಂತರ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಬೇಲೂರು ತಾಲೂಕಿನ ನಿಡಗೂಡು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. 21 ವರ್ಷದ ಸಂಗೀತಾ ಆತ್ಮಹತ್ಯೆಗೆ ಶರಣಾದ ಯುವತಿ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Home add -Advt

ಬಿಕಾಂ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿದ್ದ ಸಂಗೀತಾಳಿಗೆ ಶಿವು ಎಂಬ ಯುವಕ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಆಕೆ ನಿರಾಕರಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಯನ್ನು ಮಾಡಿದ್ದ. ಅಲ್ಲದೇ ಪ್ರೀತಿಸದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆರೋಪಿ ಶಿವುನನ್ನು ಬೇಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.


Related Articles

Back to top button