ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜುನ್ 2ರಂದು ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದ್ದು, ಇಂದಿನಿಂದಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಲಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಹವಾಮಾನ ಇಲಾಖೆ ವರದಿ ಪ್ರಕಾರ ಬೆಂಗಳೂರಿನಲ್ಲಿ 7 ಮಿ.ಮೀವರೆಗೆ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ.
ಜೂನ್ 2ರ ರಾತ್ರಿ ಅಥವಾ ಜೂನ್ 3ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಂಗಳೂರು ನಗರ, ಗ್ರಾಮಾಂತರ, ರಾಮನಗರಗಳಲ್ಲಿ ವರುಣನ ಆರ್ಭಟ ಹೆಚ್ಚಲಿದೆ ಎಂದು ತಿಳಿಸಿದೆ.
ಉತ್ತರ ಕರ್ನಾಟಕದಲ್ಲಿ ಒಣಹವೆ ಇರಲಿದ್ದು, ಇಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಧಾರವಾಡ, ರಾಯಚೂರು, ಯಾದಗಿರಿ, ಬೆಳಗಾವಿ ಹಾಗೂ ದಾವಣಗೀ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ