
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ನಾಳೆಯೇ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಗಮಿತ ಸಿಎಂ ಬಿಎಸ್ ಯಡಿಯೂರಪ್ಪ, ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೆಸರನ್ನು ಪ್ರಸ್ತಾಪಿಸಿದರು. ಬೊಮ್ಮಾಯಿ ಹೆಸರನು ಗೋವಿಂದ ಕಾರಜೋಳ ಅನುಮೋದಿಸಿದ್ದು, ಇದಕ್ಕೆ ಶಾಸಕರು ಕೂಡ ಒಮ್ಮತದಿಂದ ಸಮ್ಮಿತಿ ಸೂಚಿಸಿದರು.
ನಾಳೆ ಮಧ್ಯಾಹ್ನ 3:30ಕ್ಕೆ ಬಸವರಾಜ್ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ರಾಜ್ಯದ 20ನೇ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ. ಇದೀಗ ಅವರು ರಾಜಭವನಕ್ಕೆ ತೆರಳಿದ್ದಾರೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ವೀಕ್ಷಕರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ಹಂಗಾಮಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ 90ಕ್ಕೂ ಹೆಚ್ಚು ಶಾಸಕರು ಪಾಲ್ಗೊಂಡಿದ್ದರು.
ಬಸವರಾಜ ಬೊಮ್ಮಾಯಿ ಬಯೋಡಾಟಾ – Bommai_Resume
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ: ಅಧಿಕೃತ ಘೋಷಣೆ